ಶ್ರೀನಗರ, ಜು 11 (DaijiworldNews/HR): ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪೋರಾದಲ್ಲಿ ಎನ್ಕೌಂಟರ್ ನಡೆಯುತ್ತಿದ್ದು, ಇದರಲ್ಲಿ ಮತ್ತೋರ್ವ ಉಗ್ರನನ್ನು ಹತ್ಯೆ ಮಾಡಿದ್ದು, ಇಂದು ಒಟ್ಟು ಇಬ್ಬರು ಉಗ್ರರು ಹತರಾಗಿದ್ದಾರೆ.
ಆವಂತಿಪೋರಾದಲ್ಲಿ ಭಾನುವಾರದಿಂದ ನಡೆಯುತ್ತಿರುವ ಸೇನಾ ಕಾರ್ಯಾಚರಣೆ ಇಂದೂ ಕೂಡ ಮುಂದುವರೆದಿದ್ದು, ಇಂದು ಮತ್ತೋರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ. ಆ ಮೂಲಕ ಈ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.
ಇನ್ನು ಉಗ್ರರ ಅಡಗಿರುವ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದ ನಂತರ ಎನ್ಕೌಂಟರ್ ಪ್ರಾರಂಭವಾಯಿತು ಎಂದು ಕಾಶ್ಮೀರ ಎಡಿಜಿಪಿ ವಿಜಯ್ ಕುಮಾರ್ ಹೇಳಿದ್ದಾರೆ.