ಬೆಂಗಳೂರು, ಜು 11 (DaijiworldNews/HR): ಸರ್ಕಾರದ ಒತ್ತಡಕ್ಕೆ ಮಣಿದು ಪಿಎಸ್ಐ ಅಕ್ರಮ ಪ್ರಕರಣದ ವಿಚಾರಣೆ ನಡೆಸುತ್ತಿರುವ ಅಧಿಕಾರಿಗಳು, ಪ್ರಬಲ ಅಧಿಕಾರಿ ಹಾಗೂ ರಾಜಕಾರಣಿಗಳಿಗೆ ಬೆಂಬಲವಾಗಿ ನಿಂತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಪಿಎಸ್ಐ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪೌಲ್ ಅವರನ್ನು ತನಿಖಾಧಿಕಾರಿಗಳು ಬಂಧಿಸಿದ್ದು, ನ್ಯಾಯಾಲಯದ ಮುಂದೆ ಅವರ ಹೇಳಿಕೆ ದಾಖಲಿಸಿಕೊಳ್ಳಬೇಕು ಎಂದರು.
ಇನ್ನು ಸಚಿವ ಆರ್. ಅಶೋಕ್ ಕೂಡ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಸಿದ್ದರಾಮಯ್ಯ ಅವರ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿಗಳೂ ಆಗಿದ್ದು, ತಮಗೆ ಬಂದಿರುವ ಮಾಹಿತಿ ಆಧಾರದ ಮೇಲೆ ಈ ಪ್ರಕರಣದಲ್ಲಿ ಸಚಿವರುಗಳು ಭಾಗಿಯಾಗಿದ್ದಾರೆ ಎಂದು ಹೇಳಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.