ಕಣ್ಣೂರು, ಜು 12 (DaijiworldNews/MS): ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಕಚೇರಿ ಮೇಲೆ ಜು.12ರ ಮುಂಜಾನೆ ಬಾಂಬ್ ದಾಳಿ ನಡೆದಿದೆ.
ದಾಳಿಯಲ್ಲಿ ಕಟ್ಟಡದ ಕಿಟಕಿ ಗಾಜುಗಳು ಮುರಿದು ಬಿದ್ದಿರುವ ಘಟನೆ ನಡೆದಿದೆ ಎಂದು ಪಯ್ಯನ್ನೂರು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಸ್ಥಳೀಯ ಪೊಲೀಸ್ ಠಾಣೆ ಸಮೀಪದಲ್ಲಿಯೇ ಈ ದಾಳಿ ನಡೆದಿದೆ. ಬಾಂಬ್ ದಾಳಿಯ ಪರಿಣಾಮವಾಗಿ ಯಾವುದೇ ಗಾಯಗಳು ವರದಿಯಾಗಿಲ್ಲ
ದಾಳಿಗಳನ್ನು ತಡೆಯುವಲ್ಲಿ ವಿಫಲವಾದ ರಾಜ್ಯದ ಆಡಳಿತ ಸಂಪೂರ್ಣ ವೈಫಲ್ಯವಾಗಿದೆ ಎಂದು ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.