ಮಡಿಕೇರಿ, ಜು 13 (DaijiworldNews/DB): ಶಾಲಾ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚೆಟ್ಟಳ್ಳಿ ಸಮೀಪದ ಕತ್ತಲೆಕಾಡು ತಿರುವಿನಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
ಮಕ್ಕಂದೂರು ನಿವಾಸಿ ಕೂಲಿ ಕಾರ್ಮಿಕ ಲಿತೀಶ್ ಪೂಜಾರಿ (22) ಮೃತ ವ್ಯಕ್ತಿ. ಘಟನೆಯಲ್ಲಿ ಮೂರನೇ ಮೈಲು ನಿವಾಸಿ ಬಿ.ಎನ್. ಕೋಟಿ (60 ) ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳೀಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.