ಬೆಂಗಳೂರು, ಜು 14 (DaijiworldNews/HR): ಕಿಕ್ ಬಾಕ್ಸಿಂಗ್ನಲ್ಲಿ ಪಾಲ್ಗೊಂಡಿದ್ದ ಮೈಸೂರಿನ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತ ಯುವಕನನ್ನು ನಿಖಿಲ್ (24)ಎಂದು ಗುರುತಿಸಲಾಗಿದ್ದು, ಈತ ಬೆಂಗಳೂರಿನ ಕೆಂಗೇರಿಯಲ್ಲಿ ಕೆ1 ಕಿಕ್ ಬಾಕ್ಸರ್ ಆರ್ಗನೈಸೇಷನ್ ವತಿಯಿಂದ ಜುಲೈ 10ರಂದು ನಡೆದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ.
ಇನ್ನು ಕಿಕ್ ಬಾಕ್ಸಿಂಗ್ನ ರಿಂಗ್ನಲ್ಲಿ ಸೆಣಸಾಡುತ್ತಿರುವಾಗ ಎದುರಾಳಿಯು ನಿಖಿಲ್ ತಲೆಗೆ ಹೊಡೆದ ಏಟಿಗೆ ಬಾಕ್ಸಿಂಗ್ ರಿಂಗ್ನಲ್ಲೇ ನಿಖಿಲ್ ಕೆಳಗೆ ಬಿದ್ದವರು ಮೇಲಕ್ಕೆ ಏಳಲೇ ಇಲ್ಲ. ತಕ್ಷಣ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಎರಡು ದಿನ ಕೋಮಾದಲ್ಲಿದ್ದ ನಿಖಿಲ್, ಚಿಕಿತ್ಸೆ ಫಲಿಸದೆ ಬುಧವಾರ ಕೊನೆಯುಸಿರೆಳೆದಿದ್ದಾನೆ.