ನವದೆಹಲಿ, ಜು 14 (DaijiworldNews/DB): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿರುವುದು ಫ್ಯಾಶನ್ ಶೋ ಮಾಡಲು ಎಂಬಂತಾಗಿದೆ ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಲೇವಡಿ ಮಾಡಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೋಟೋಶೂಟ್ ಮಾಡಿಸಿಕೊಂಡು ಫ್ಯಾಶನ್ ಶೋ ಮಾಡಲೆಂದು ಸಿಎಂ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ರಾತ್ರಿ ವೇಳೆ ಹೋಗಿ ಪ್ರವಾಹ, ಹಾನಿ ಪರಿಸ್ಥಿತಿಗಳನ್ನು ಅಧ್ಯಯನ ಮಾಡಲು ಸಾಧ್ಯವಾಗುತ್ತದೆಯೇ? ಎಂದು ಅವರು ಪ್ರಶ್ನಿಸಿದರು.
ರಾಜ್ಯದ ವಿವಿಧೆಡೆ ಕಳೆದೊಂದು ವಾರದಿಂದ ಸುರಿದ ಭಾರೀ ಮಳೆಯಿಂದಾಗಿ ಸಾಕಷ್ಟು ಹಾನಿ ಸಂಭವಿಸಿದೆ. ಹಾನಿ ಉಂಟಾದ ಪ್ರದೇಶಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ತೆರಳಿ ಪರಿಶೀಲನೆ ಮಾಡುತ್ತಿದ್ದಾರೆ.