ತಿರುವನಂತಪುರ, ಜು 14 (DaijiworldNews/MS) : ಕೇರಳದಲ್ಲಿ ಶಂಕಿತ ಮಂಕಿಪಾಕ್ಸ್ ವೈರಸ್ ಸೋಂಕಿನ ಪ್ರಕರಣ ಪತ್ತೆಯಾಗಿದ್ದು, ಶಂಕಿತ ವ್ಯಕ್ತಿಯನ್ನು ತೀವ್ರ ನಿಗಾದಲ್ಲಿ ಇರಿಸಲಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಗುರುವಾರ ತಿಳಿಸಿದ್ದಾರೆ.
ವಿದೇಶದಿಂದ ಆಗಮಿಸಿದ ವ್ಯಕ್ತಿಯಲ್ಲಿ ಮಂಕಿ ಪಾಕ್ಸ್ ಸೋಂಕಿನ ರೋಗಲಕ್ಷಣಗಳು ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಂಕಿತ ವ್ಯಕ್ತಿಯ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ ಫಲಿತಾಂಶ ಬಂದ ಬಳಿಕವಷ್ಟೇ ರೋಗದ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.
ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸದೆ ವೀಣಾ ಜಾರ್ಜ್, ಆತ ವಿದೇಶದಲ್ಲಿ ಮಂಕಿ ಪಾಕ್ಸ್ ರೋಗಿಯ ಸಂಪರ್ಕಕ್ಕೆ ಬಂದಿರುವುದು ತಿಳಿದುಬಂದಿದೆ ಎಂದು ಹೇಳಿದ್ದಾರೆ.