ಶಿರಸಿ, ಜು 14 (DaijiworldNews/HR): ಕರ್ನಾಟಕದ 1,500 ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಮಾಡುವ ಕಾರ್ಯ ಆರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲೇ ರಾಜ್ಯದ 1,500 ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿಸುವ ಕೆಲಸವನ್ನು ಮಾಡಲಾಗುವುದು. ಮಾದರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ಕಲಿಸಲಾಗುವುದು ಎಂದಿದ್ದಾರೆ.
ಇನ್ನು ಪಠ್ಯಪರಿಷ್ಕರಣೆ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಪಠ್ಯಪರಿಷ್ಕರಣೆ ಹಿಂದೆಯೂ ಆಗಿತ್ತು. ಆದರೆ ನಾವು ಚರ್ಚೆ ನಡೆಸುತ್ತಿದ್ದೇವು. ಈಗಿನ ವಿರೋಧ ಪಕ್ಷಗಳಂತೆ ಬೀದಿಯಲ್ಲಿ ಕೂಗುತ್ತಿರಲಿಲ್ಲ ಎಂದು ಹೇಳಿದ್ದಾರೆ.