ಕಲಬುರಗಿ, ಜು 14 (DaijiworldNews/HR): ಪಿಎಸ್ಐ ಹಗರಣದಲ್ಲಿ ಅಧಿಕಾರಿಗಳನ್ನು ಬಂಧಿಸಿದರೆ ಸಾಕಾಗುವುದಿಲ್ಲ ಬದಲಿಗೆ ಅವರಿಗೆ ಮಂಪರು ಪರೀಕ್ಷೆ ಮಾಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ಐ ನೇಮಕಾತಿ ಹಗರಣದಲ್ಲಿ ಸರ್ಕಾರ ಅಧಿಕಾರಿಗಳನ್ನು ಬಂಧಿಸಿದರೆ ಸಾಲದು, ಅವರಿಗೆ ಮಂಪರು ಪರೀಕ್ಷೆ ನಡೆಸಲಿ ಎಂದಿದ್ದಾರೆ.
ಇನ್ನು ಈ ಪ್ರಕರಣದಲ್ಲಿ ಭಾಗಿಯಾದವರ ಹೆಸರು ಹೇಳದಂತೆ ಅಧಿಕಾರಿಗಳಿಗೆ ಒತ್ತಡ ಹೇರಲಾಗುತ್ತಿದ್ದು, ಮೊದಲಿಗೆ ಅಧಿಕಾರಿಗಳಿಗೆ ಮಂಪರು ಪರೀಕ್ಷೆ ಮಾಡಬೇಕು ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿದ್ದಾಗಲೂ ಪಿಎಸ್ಐ ಹಗರಣ ನಡೆದಿತ್ತು ಎಂಬ ಸಚಿವ ಅಶ್ವಥ್ ನಾರಾಯಣ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ನಾನು ಮುಖ್ಯಮಂತ್ರಿಯಾಗಿದ್ದಾಗ ಹಗರಣ ನಡೆದಿದ್ದರೆ, ಆಗ ವಿರೋಧಪಕ್ಷದಲ್ಲಿದ್ದ ಅಶ್ಥಥ್ ನಾರಾಯಣ ಕಡುಬು ತಿನ್ನುತ್ತಿದ್ದರ ಎಂದು ಪ್ರಶ್ನಿಸಿದ್ದಾರೆ.