ಚೆನ್ನೈ, ಜು 14 (DaijiworldNews/MS) : ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನಲೆಯಲ್ಲಿ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸ್ಟಾಲಿನ್ ಅವರಿಗೆ ಕಳೆದೆರಡು ದಿನಗಳ ಹಿಂದೆ ಕೋವಿಡ್ ಸೋಂಕು ತಗುಲಿತ್ತು. ಇಂದು ಆರೋಗ್ಯದಲ್ಲಿ ಕೊಂಚ ಏರುಪೇರಾದ ಹಿನ್ನಲೆಯಲ್ಲಿ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇವರ ಆರೋಗ್ಯದ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ಆಸ್ಪತ್ರೆ ಕೋವಿಡ್ ಸಂಬಂಧಿತ ರೋಗಲಕ್ಷಣಗಳ ತಪಾಸಣೆ ನಡೆಸಲಾಗುತ್ತಿದೆ ಎಂದು ಹೇಳಿದೆ.