ಹಾಸನ, ಜು 14 (DaijiworldNews/HR): ಶಿರಾಡಿ ಘಾಟ್ನಲ್ಲಿ ಮತ್ತೆ ಭೂ ಕುಸಿತಗೊಂಡಿದ್ದು, ಭಾರೀ ವಾಹನಗಳ ಸಂಚಾರವನ್ನು ನಿಷೇಧಗೊಳಿಸಿ ಜಿಲ್ಲಾಡಳಿತ ಆದೇಶಿಸಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪದ ವಾರದ ಹಿಂದೆ ಸ್ವಲ್ಪ ಪ್ರಮಾಣದಲ್ಲಿ ರಸ್ತೆ ಕುಸಿತಗೊಂಡಿದ್ದ ಕಾರಣ, ಅದರ ರಿಪೇರಿ ಕೆಲಸ ನಡೆಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತದಿಂದ ಶಿರಾಡಿ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿದೆ.
ಇನ್ನು ರಸ್ತೆ ಕುಸಿತಗೊಂಡಿದ್ದಂತ ಸ್ಥಳಕ್ಕೆ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ಧರು.
ಈ ಬಳಿಕ ನಾಲ್ಕು ದಿನಕ್ಕೆ ಮತ್ತೆ ಭೂ ಕುಸಿತಗೊಂಡಿದೆ. ಕಳೆದ ವರ್ಷ ಕೂಡ ಇದೇ ಸ್ಥಳದಲ್ಲಿ ಭೂ ಕುಸಿತಗೊಂಡಿತ್ತು.
ಗುತ್ತಿಗೆದಾರರ ಕಳಪೆ ಕಾಮಗಾರಿ ಹಾಗೂ ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದ ಭೂಕುಸಿತ ಉಂಟಾಗಿದೆ ಎಂದು ಶಾಸಕ ಎಚ್.ಕೆ.ಕುಮಾರಸ್ವಾಮಿ ಆರೋಪಿಸಿದ್ದಾರೆ.