ಚೆನ್ನೈ, ಜು 14 (DaijiworldNews/HR): ಅಂಡಾಣು ಮಾರಾಟ ಮಾಡುವುದು ಕಾನೂನು ಬಾಹಿರವಾಗಿದ್ದು, ಇಂತಹ ಕೃತ್ಯದಲ್ಲಿ ತೊಡಗಿದ್ದ ನಾಲ್ಕು ಆಸ್ಪತ್ರೆಗಳಿಗೆ ತಮಿಳುನಾಡಿನ ಆರೋಗ್ಯ ಇಲಾಖೆ ಅಧಿಕಾರಿಗಳು ಬೀಗ ಹಾಕಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಈ ಆಸ್ಪತ್ರೆಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದ್ದು, 18 ರಿಂದ 20 ವಯಸ್ಸಿನ ಯುವತಿಯರ ಅಂಡಾಣುವನ್ನು ಶೇಖರಿಸಿ ಮಾರಾಟ ಮಾಡಲಾಗುತ್ತಿತ್ತು. ಇದರಲ್ಲಿ 16 ವರ್ಷ ವಯಸ್ಸಿನವರೂ ಹೆಚ್ಚಿನವರಿದ್ದಾರೆ ಎನ್ನಲಾಗಿದೆ.
ಈ ಕುರಿತು ಆರೋಗ್ಯ ಸಚಿವ ಮಾ. ಸುಬ್ರಮಣಿಯನ್ ಮಾಹಿತಿ ನೀಡಿದ್ದು, ಅಂಡಾಣು ಶೇಖರಿಸಿ ಮಾರಾಟ ಮಾಡುತ್ತಿದ್ದರಿಂದ ನಾಲ್ಕು ಆಸ್ಪತ್ರೆಗಳನ್ನು ಮುಚ್ಚಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ ಎಂದರು.
ಇನ್ನು ಈ ಆಸ್ಪತ್ರೆಗಳ ವಿರುದ್ಧ ಆರೋಪ ಸಾಬೀತಾದಲ್ಲಿ 50 ಲಕ್ಷ ರೂ. ದಂಡ ಹಾಗೂ ಭಾಗಿಯಾದ ವೈದ್ಯರಿಗೂ ಸಹ 10 ವರ್ಷ ಜೈಲು ಶಿಕ್ಷೆ ವಿಧಿಸಬಹುದಾಗಿದೆ ಎಂದು ಹೇಳಿದ್ದಾರೆ.