ನವದೆಹಲಿ, ಜು 14 (DaijiworldNews/HR): ಹಿಂದೂ ದೇವತೆ ಕುರಿತ ಆಕ್ಷೇಪಾರ್ಹ ಟ್ವೀಟ್ಗೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧತನಾಗಿರುವ ಆಲ್ಟ್ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ಗೆ ಹತ್ರಾಸ್ ನ್ಯಾಯಾಲಯವು ಗುರುವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಹಿಂದೂ ದೇವತಗಳ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ಜೂನ್ 27 ರಂದು ಜುಬೇರ್ನನ್ನು ದೆಹಲಿ ಪೊಲೀಸರು ಬಂಧಿಸಿದ್ದರು.
ಇನ್ನು ಹಿಂದೂ ಶೇರ್ ಸೇನೆಯ ಜಿಲ್ಲಾಧ್ಯಕ್ಷ ಭಗವಾನ್ ಶರಣ್ ಅವರ ದೂರಿನ ಆಧಾರದ ಮೇಲೆ ಜೂನ್ 1 ರಂದು ಭಾರತೀಯ ದಂಡ ಸಂಹಿತೆ ಸೆಕ್ಷನ್ 295 ಎ ಮತ್ತು ಐಟಿ ಕಾಯ್ದೆಯ ಸೆಕ್ಷನ್ 67 ರ ಅಡಿಯಲ್ಲಿ ಸೀತಾಪುರದಲ್ಲಿ ಜುಬೇರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.