ನವದೆಹಲಿ, ಜು 15 (DaijiworldNews/DB): ಲಿವ್-ಇನ್ ಪಾಲುದಾರನಿಂದ 14 ಬಾರಿ ಗರ್ಭ ಧರಿಸಿ ಗರ್ಭಪಾತಕ್ಕೊಳಗಾಗಿ ಮೋಸ ಹೋದ ಕಾರಣ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಆಗ್ನೇಯ ದೆಹಲಿಯ ಜೈತ್ಪುರ ಪ್ರದೇಶದಲ್ಲಿ ನಡೆದಿದೆ.
ಎಂಟು ವರ್ಷಗಳ ಅವಧಿಯಲ್ಲಿ 14 ಬಾರಿ ಈಕೆ ಬಲವಂತದ ಗರ್ಭಪಾತಕ್ಕೆ ಒಳಗಾಗಿದ್ದಳು. ಮದುವೆಯಾಗುವುದಾಗಿ ನಂಬಿಸಿ ಈಕೆಯ ಲಿವ್-ಇನ್ ಪಾಲುದಾರ, ನೋಯ್ಡಾದ ಸಾಫ್ಟ್ವೇರ್ ಸಂಸ್ಥೆಯಲ್ಲಿ ಕೆಲಸ ಈಕೆಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ. ಆದರೆ ಬಳಿಕ ಮದುವೆಗೆ ನಿರಾಕರಿಸಿದ್ದಾನೆ. ಪತಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದ ಆಕೆ ಜುಲೈ 5 ರಂದು ಸೂಸೈಡ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇದೀಗ ಆಕೆಯ ಲಿವ್-ಇನ್ ಪಾಲುದಾರನ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.
ಮೃತಳ ಮೊಬೈಲ್ ಫೋನ್ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಿಹಾರದ ಮುಜಾಫರ್ಪುರದಲ್ಲಿ ನೆಲೆಸಿರುವ ಆಕೆಯ ಪೋಷಕರಿಗೆ ಮಾಹಿತಿ ನೀಡಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬಿಕರಿಗೆ ಹಸ್ತಾಂತರಿಸಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.