ನವದೆಹಲಿ, ಜು 15 (DaijiworldNews/MS): ರಾಷ್ಟ್ರ ರಾಜಧಾನಿ ದೆಹಲಿಯ ಅಲಿಪುರ ಪ್ರದೇಶದಲ್ಲಿ ಗೋಡೌನ್ನಲ್ಲಿ ಗೋಡೆ ಕುಸಿದು ಐವರು ಸಾವನ್ನಪ್ಪಿದ್ದು ಹಲವಾರು ಮಂದಿ ಅದರಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ನಡೆದ ಬೆನ್ನಲ್ಲೇ ಪೊಲೀಸರು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ತಲುಪಿದ್ದು ಕಾರ್ಯಾಚರಣೆ ಆರಂಭಿಸಿದೆ. ಈಗಾಗಲೇ 10 ಮಂದಿಯನ್ನು ರಕ್ಷಿಸಲಾಗಿದ್ದು. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಇನ್ನೂ ಹಲವಾರು ಮಂದಿ ಸಿಕ್ಕಿಬಿದ್ದಿರುವ ಶಂಕೆ ಇರುವುದರಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಅಪಘಾತದ ವೇಳೆ ಗೋದಾಮಿನಲ್ಲಿ 20 ರಿಂದ 25 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ.