ಮೈಸೂರು, ಜು 15 (DaijiowrldNews/HR): ಬಾದಾಮಿ ತಾಲೂಕಿನ ಕೆರೂರಿನಲ್ಲಿ ಮಹಿಳೆ ಹಣ ಎಸೆದು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಯಾರು ಶಾಂತಿ ಕದಡುತ್ತಿದ್ದಾರೋ ಅವರು ಗಮನಿಸಬೇಕು. ಈಗ ಮುಸ್ಲಿಂ ಮಹಿಳೆಯರು ಶಾಂತಿ ಕೇಳುವುದರಲ್ಲಿ ತಪ್ಪಿಲ್ಲ. ಕರ್ನಾಟಕದಲ್ಲಿ ಶಾಂತಿ ವಿಚಾರದ ಬಗ್ಗೆ ಮುಖ್ಯಮಂತ್ರಿ ಅವರನ್ನು ಪ್ರಶ್ನಿಸಿ ಎಂದು ಹೇಳಿದ್ದಾರೆ.
ಬಾದಾಮಿಯ ಕೆರೂರು ಗುಂಪು ಘರ್ಷಣೆ ವೇಳೆ ಕೆಲ ಜನರಿಗೆ ಗಾಯವಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ ಸಾಂತ್ವನ ಹೇಳಿ ಪರಿಹಾರ ನೀಡುವ ಸಲುವಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದಾಗ ಮಹಿಳೆಯೊಬ್ಬರಿಗೆ 2 ಲಕ್ಷ ನೀಡಿ ಸಂದರ್ಭದಲ್ಲಿ ನನಗೆ ಹಣಬೇಡ ನನಗೆ ಶಾಂತಿ, ನಮಗೆ ನ್ಯಾಯ ಕೊಡಿ ಎಂದು ಸಿದ್ದರಾಮಯ್ಯ ಅವರು ನೀಡಿದ ಹಣವನ್ನು ಏಕಾಏಕಿ ಕಾರಿನ ಮೇಲೆ ಎಸೆದಿದ್ದರು.