ಬೆಂಗಳೂರು, ಜು 15 (DaijiworldNews/DB): ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರ ವಲಯದ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ಮೂಲ ದಾವೆಯ ಸಿಂಧುತ್ವದ ಕುರಿತು ವಿಚಾರಣೆ ನಡೆಸುತ್ತಿರುವ ಮಂಗಳೂರಿನ ಸಿವಿಲ್ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಧನಂಜಯ್ ಮತ್ತು ಮನೋಜ್ ಕುಮಾರ್ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ನೇತೃತ್ವದ ಏಕಸದಸ್ಯ ಪೀಠವು ಈ ಸಂಬಂಧ ಜೂನ್ 24ರಂದು ತೀರ್ಪು ಕಾಯ್ದಿರಿಸಿತ್ತು. ಇಂದು ಆ ತೀರ್ಪು ಪ್ರಕಟವಾಗಿದೆ.
ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಕಮಿಷನರ್ ನೇಮಕ ಮಾಡಿ ಸ್ಥಳ ಪರಿಶೀಲನೆಗೆ ಅವಕಾಶ ನೀಡಲಾಗಿದೆ. ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯ ಮಳಲಿ ಮಸೀದಿಯಲ್ಲಿ ದೇವಾಲಯ ಮಾದರಿಯ ರಚನೆ ಪತ್ತೆಯಾಗಿರುವ ಕುರಿತು ಪರಿಶೀಲನೆ ನಡೆಸಲು ಕಮಿಷನರ್ ನೇಮಕ ಮಾಡಬೇಕು ಎಂದು ಅರ್ಜಿದಾರರು ಕೋರಿದ್ದರು.