ನವದೆಹಲಿ, ಜು 15 (DaijiworldNews/DB): ಚಲಿಸುತ್ತಿರುವ ಕಾರಿನಲ್ಲಿಯೇ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ದೆಹಲಿಯಲ್ಲಿ ನಡೆದಿದೆ. ಘಟನೆ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
16 ವರ್ಷದ ಬಾಲಕಿ ತನ್ನ ಸ್ನೇಹಿತನ ಮನೆಯಿಂದ ವಾಪಸ್ಸಾಗುತ್ತಿದ್ದ ವೇಳೆ ವಸಂತ ವಿಹಾರ್ ಮಾರುಕಟ್ಟೆಯಲ್ಲಿ ಭೇಟಿಯಾದ ಆರೋಪಿಗಳು ಕಾರಿನಲ್ಲಿ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳು ಬಾಲಕಿಯ ಮನೆಯ ಪಕ್ಕದಲ್ಲೇ ವಾಸಿಸುತ್ತಿರುವವರಾಗಿದ್ದಾರೆ. ಬಾಲಕಿ ನೀಡಿದ ದೂರಿನಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ದಕ್ಷಿಣ ದೆಹಲಿಯ ವಸಂತ ವಿಹಾರ್ ನಿಂದ ನೆರೆಯ ಉತ್ತರ ಪ್ರದೇಶದ ಗಾಜಿಯಾಬಾದ್ ಗೆ ಸುಮಾರು 44 ಕಿ.ಮೀ.ಗಳಷ್ಟು ದೂರ ಕಾರು ಚಲಾಯಿಸಿಕೊಂಡು ಹೋಗಿದ್ದರು ಎನ್ನಲಾಗಿದೆ.