ಬೆಂಗಳೂರು, ಜು 15 (DaijiworldNews/DB): ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಭಾಗಿಯಾದ ಆರೋಪದ ಮೇಲೆ ಸಿಐಡಿಯಿಂದ ಬಂಧಿಸಲ್ಪಟ್ಟಿರುವ ಎಡಿಜಿಪಿ ಅಮೃತ್ ಪೌಲ್ ಅವರಿಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಕೋರ್ಟ್ ಆದೇಶಿಸಿದೆ.
ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ಅಮೃತ್ ಪೌಲ್ ಅವರ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಮುಕ್ತಾಯಗೊಂಡಿತ್ತು. ಹೀಗಾಗಿ ಅವರನ್ನು ಇಂದು ಬೆಂಗಳೂರಿನ ಒಂದನೇ ಎಸಿಎಂಎ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಸ್ತರಣೆ ಮಾಡಿ ಆದೇಶಿಸಿದರು.
ಎಡಿಜಿಪಿ ಅಮೃತ್ ಪೌಲ್ ಅವರ ಬಂಧನವಾಗುತ್ತಿದ್ದಂತೆ ಅವರನ್ನು ಹುದ್ದೆಯಿಂದ ಅಮಾನತು ಮಾಡಲಾಗಿತ್ತು.