ಬೆಂಗಳೂರು, ಜು 16 (DaijiworldNews/MS): ಕರ್ನಾಟಕ ಸರ್ಕಾರ ಕನ್ನಡದಲ್ಲಿ ತಪ್ಪು ತಪ್ಪಾಗಿ ಬರೆದು ಹೊರಡಿಸಿದ ಆದೇಶ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಟೀಕೆಗೆ ಒಳಗಾಗಿದೆ.
ಸರಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ/ ವಿಡಿಯೋ ಮಾಡಬಾರದೆಂದು ಸರಕಾರ ಹೊರಡಿಸಿದ ಆದೇಶವನ್ನು ರಾಜ್ಯ ಸರಕಾರ ಮಧ್ಯರಾತ್ರಿ ಹಿಂಪಡೆದಿದೆ. ಆದರೆ ಆ ಆದೇಶದಲ್ಲಿ ವ್ಯಾಕರಣ ದೋಷಗಳೇ ತುಂಬಿ ತುಳುಕುತ್ತಿದೆ.
ನಡಾವಳಿ ಎಂಬ ಶಬ್ದವನ್ನು ನಡವಳಿ, ಪ್ರಸ್ತಾವನೆಯನ್ನು ಪ್ರಸತ್ತಾವನೆ, ಮೇಲೆ- ಮೇಲೇ, ಭಾಗ- ಬಾಗ, ಕರ್ನಾಟಕ- ಕರ್ನಾಟಾ, ಆಡಳಿತ- ಆಡಳಿದ ಹೀಗೆ ಹಲವು ಪದಗಳನ್ನು ತಪ್ಪು ತಪ್ಪಾಗಿ ಮುದ್ರಿಸಲಾಗಿದೆ.
ರಾಜ್ಯ ಸರಕಾರದ ಆಡಳಿತದಲ್ಲಿನ ತಪ್ಪು ಕನ್ನಡದ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.