ಬೆಂಗಳೂರು, ಜು 16 (DaijiworldNews/HR): ಜೈಲುಗಳಲ್ಲಿ ಗಾಂಜಾ ಪೂರೈಕೆ, ಅಕ್ರಮ ನಡೆಯದಂತೆ ಬಿಗಿ ಕ್ರಮ ಕೈಗೊಳ್ಳಲಾಗುತ್ತದೆ. ಒಂದೆರಡು ಜೈಲುಗಳಲ್ಲಿ ಕೆಲವರು ಇದ್ದು, ಅದನ್ನು ಸರಿಪಡಿಸುತ್ತೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುರುಗನ್ ಸಮಿತಿ ವರದಿ ಆಧಾರದಲ್ಲಿ ಪರಪ್ಪನ ಅಗ್ರಹಾರದಲ್ಲಿ 15 ಸಿಬ್ಬಂದಿ ಅಮಾನತು ಮಾಡಲಾಗಿದ್ದು, 30 ಸಿಬ್ಬಂದಿ ವರ್ಗಾವಣೆ ಮಾಡಲಾಗಿದೆ ಎಂದರು.
ಇನ್ನು ಈಗ ಜೈಲು ಸಿಬ್ಬಂದಿ ಅಲರ್ಟ್ ಆಗಿದ್ದಾರೆ, ಎಲ್ಲವನ್ನು ಹಿಡಿಯುತ್ತಿದ್ದಾರೆ. ಫೋನ್, ನಿಷೇಧಿತ ವಸ್ತು ಬಳಕೆ ಮಾಡಿದರೆ ಎಫ್ಐಆರ್ ಆಗುತ್ತಿದೆ. ಕೈದಿಗಳ ಶಿಕ್ಷೆ ಪ್ರಮಾಣ ಮುಗಿದ ಬಳಿಕ ಐದು ವರ್ಷ ಶಿಕ್ಷೆ ವಿಧಿಸುವ ಅವಕಾಶ ಇದ್ದು, ಸಿಬ್ಬಂದಿಯ ವಿರುದ್ಧವೂ ಎಫ್ಐಆರ್ ದಾಖಲು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.