ನವದೆಹಲಿ, ಜು 16 (DaijiworldNews/DB): ವಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಅವರಿಗೆ ಆಮ್ ಆದ್ಮಿ ಪಕ್ಷ ಬೆಂಬಲ ಘೋಷಿಸಿದೆ.
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಈ ಘೋಷಣೆ ಮಾಡಿದ್ದು, ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಪಕ್ಷವು ಸಿನ್ಹಾ ಅವರನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ.
ದ್ರೌಪದಿ ಮುರ್ಮು ಅವರ ಬಗ್ಗೆ ನಮಗೆ ಗೌರವವಿದೆ. ಆದರೆ ಚುನಾವಣೆಯಲ್ಲಿ ಸಿನ್ಹಾರನ್ನು ಬೆಂಬಲಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.