ಬೆಂಗಳೂರು, ಜು 16 (DaijiworldNews/DB): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಕಾಟಾಚಾರಕ್ಕೆ ಪ್ರವಾಸ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರುಗಳು ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಗಾಂಧಿಭವನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಸರ್ಕಾರಕ್ಕೆ ಜನರ ಬಗ್ಗೆ ಯಾವುದೇ ಕಾಳಜಿ ಇಲ್ಲದಾಗಿದೆ. ಮಳೆಯಿಂದಾಗಿ ಜನರು ತೊಂದರೆಯಲ್ಲಿದ್ದರೂ, ಬಿಜೆಪಿ ಶಾಸಕರು, ಸಚಿವರು ಬೆಂಗಳೂರಿನ ಹೊಟೇಲ್ಗಳಲ್ಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಾಮರಸ್ಯ ಕೆಡಿಸುವುದು ಬಿಜೆಪಿಯವರ ಕೆಲಸವಾಗಿದೆ. ಹೀಗಾಗಿ ನನ್ನ ಹುಟ್ಟುಹಬ್ಬದ ಬಗ್ಗೆ ಅನಗತ್ಯ ಟೀಕೆಯಲ್ಲಿ ತೊಡಗಿದ್ದಾರೆ. ಯಡಿಯೂರಪ್ಪ ಅವರ ಹುಟ್ಟುಹಬ್ಬಕ್ಕೂ ನಾನು ಹೋಗಿದ್ದೆ. ಆಗ ಇವರೆಲ್ಲ ಯಾಕೆ ಟೀಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.