ಬೆಂಗಳೂರು, ಜು 16 (DaijiworldNews/HR): ಪ್ರವಾಹ ಪರಿಸ್ಥಿತಿ ನಡುವೆಯೂ ಸಿದ್ದರಾಮಯ್ಯನವರು ಅದ್ದೂರಿಯಾಗಿ ಜನ್ಮದಿನ ಆಚರಿಸಿಕೊಳ್ಳುತ್ತಿರುವುದರ ಔಚಿತ್ಯವನ್ನು ರಾಜ್ಯದ ಜನತೆ ತೀರ್ಮಾನಿಸಲಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ ಎಂಬ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿರುವ ಪಕ್ಷ ನಮ್ಮದು. ಇದಕ್ಕೆ ತದ್ವಿರುದ್ಧವಾಗಿ ದೇಶಕ್ಕಿಂತ ಪಕ್ಷ, ಈ ಕುಟುಂಬ ಮುಖ್ಯ ಎಂಬ ಚಿಂತನೆ ಹೊಂದಿರುವ ಪಕ್ಷ ಕಾಂಗ್ರೆಸ್ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ನಾವು 'ಸ್ವಾತಂತ್ರ್ಯದ ಅಮೃತ ಮಹೋತ್ಸವ' ಆಚರಿಸಿದರೆ, ಅವರು ಅವರದ್ದೇ ಜನ್ಮದಿನ ಆಚರಣೆ ಮಾಡಿಕೊಳ್ಳುತ್ತಾರೆ. ನಮ್ಮ ಪಕ್ಷದಲ್ಲಿ ವ್ಯಕ್ತಿಪೂಜೆ, ಪಲ್ಲಕ್ಕಿ ಪೂಜೆಗೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ.