ನವದೆಹಲಿ, ಜು 16 (DaijiworldNews/HR): ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಪೊಲೀಸರ ಬಂಧಿತರಾಗಿರುವ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ಅವರ ಜಾಮೀನು ಅರ್ಜಿಯನ್ನು ಲಖಿಂಪುರ ಖೇರಿ ಸೆಷನ್ಸ್ ನ್ಯಾಯಾಲಯ ಶನಿವಾರ ಮತ್ತೆ ತಿರಸ್ಕಾರಗೊಂಡಿದೆ.
ಜುಲೈ 20 ರಂದು ಜುಬೈರ್ ಅವರ ಪೊಲೀಸ್ ಕಸ್ಟಡಿ ವಿಚಾರಣೆಯು ನಡೆಯಲಿದೆ ಎಂದು ಅವರ ಪರ ವಕೀಲ ಹರ್ಜಿತ್ ಸಿಂಗ್ ತಿಳಿಸಿದ್ದಾರೆ.
ಇನ್ನು ಜುಬೈರ್ ಅವರನ್ನು ಜೂನ್ 27ರಂದು ಬಂಧಿಸಲಾಗಿದ್ದು, ಅವರ ವಿರುದ್ಧ ಐಪಿಸಿ ಸೆಕ್ಷನ್ 153ಎ (ಧಾರ್ಮಿಕ, ಜನಾಂಗೀಯ, ಹುಟ್ಟಿದ ಸ್ಥಳ, ಭಾಷೆಯ ಹಿನ್ನೆಲೆಯಲ್ಲಿ ಭಿನ್ನ ಗುಂಪುಗಳ ನಡುವೆ ದ್ವೇಷವನ್ನು ಹರಡುವುದು) ಹಾಗೂ 295ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.