ನವದೆಹಲಿ, ಜು 16 (DaijiworldNews/HR): ಉಪರಾಷ್ಟ್ರಪತಿ ಹುದ್ದೆಗೆ ಎನ್ಡಿಎ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್ ಅವರ ಹೆಸರನ್ನು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಘೋಷಿಸಿದ್ದಾರೆ.
ಉಪರಾಷ್ಟ್ರಪತಿ ಚುನಾವಣೆಗೆ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಇಂದು ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆದಿದ್ದು, ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಹಿರಿಯ ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ನಡ್ಡಾ ಭಾಗವಹಿಸಿದ್ದರು.
ಇನ್ನು ಧನಕರ್ ಅವರು 1989-91 ರ ಅವಧಿಯಲ್ಲಿ ರಾಜಸ್ಥಾನದ ಜುಂಜುನು ಲೋಕಸಭಾ ಕ್ಷೇತ್ರದಿಂದ ಜನತಾ ದಳವನ್ನು ಪ್ರತಿನಿಧಿಸಿ ಸಂಸದರಾಗಿದ್ದು, 1993-98 ರ ಅವಧಿಯಲ್ಲಿ ರಾಜಸ್ಥಾನದ ಕಿಶನ್ಗಢ್ನಿಂದ ಶಾಸಕರಾಗಿದ್ದರು.