ಬೆಂಗಳೂರು, ಜು 17 (DaijiworldNews/HR): ರಾಜ್ಯಾದ್ಯಂತ ಮುಂದಿನ 48 ಗಂಟೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಕೆಯ ಮಾಹಿತಿ ಪ್ರಕಾರ, ಕರ್ನಾಟಕದಲ್ಲಿ ಮುಂದಿನ 48 ಗಂಟೆ ಭಾರೀ ಮಳೆಯಾಗಲಿದ್ದು, ಜುಲೈ 19 ರ ನಂತರ ರಾಜ್ಯದಲ್ಲಿ ಮಳೆ ಅಬ್ಬರ ತುಸು ಕಡಿಮೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಬೆಳಗಾವಿ, ಹಾಸನ ಜಿಲ್ಲೆಗಳಲ್ಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೀದರ್, ಕಲಬುರಗಿ ಜಿಲ್ಲೆಯಲ್ಲಿ ನಾಳೆ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.