ಶ್ರೀನಗರ, ಜು 17 (DaijiworldNews/HR): ಭದ್ರತಾ ಪಡೆಗಳ ತಂಡದ ಮೇಲೆ ಉಗ್ರರು ದಾಳಿ ನಡೆಸಿದ್ದು, ಭಯೋತ್ಪಾದಕ ದಾಳಿಯಲ್ಲಿ ಸಿಆರ್ಪಿಎಫ್ ಯೊಧರೊಬ್ಬರು ಹುತಾತ್ಮರಾಗಿರುವ ಘಟನೆ ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಹುತಾತ್ಮ ಯೋಧನನ್ನು ವಿನೋದ್ ಕುಮಾರ್ ಎಂದು ಗುರುತಿಸಲಾಗಿದೆ.
ಸೇಬು ಹಣ್ಣಿನ ತೋಟದಿಂದ ಭಯೋತ್ಪಾದಕರು ಗುಂಡು ಹಾರಿಸಿದ್ದು, ಈ ಸಮಯದಲ್ಲಿ ಸಿಆರ್ಪಿಎಫ್ ಎಎಸ್ಐ ವಿನೋದ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದು, ವಿನೋದ್ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಆದರೆ ಚಿಕಿತ್ಸೆಯ ಸಮಯದಲ್ಲಿ ಕೊನೆಯುಸಿರೆಳೆದರು ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.