ಮೈಸೂರು, ಜು 17 (DaijiworldNews/HR): 2023ರ ವಿಧಾನಸಭಾ ಚುನಾವಣೆಯೇ ನನ್ನ ಕೊನೆಯ ಚುನಾವಣೆಯಾಗಿದ್ದು, ಆ ಬಳಿಕ ಸಕ್ರೀಯ ರಾಜಕಾರಣದಿಂದ ದೂರ ಉಳಿಯಲಿದ್ದೇನೆ ಎಂದು ಸಿದ್ಧರಾಮಯ್ಯ ಘೋಷಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 2023ರ ವಿಧಾನಸಭಾ ಚುನಾವಣೆಯಲ್ಲಿ ಮಾತ್ರವೇ ಸ್ಪರ್ಧಿಸಲಿದ್ದಾರೆ. ಇದು ನನ್ನ ಕೊನೆಯ ಚುನಾವಣೆಯಾಗಿದೆ. ಆ ಬಳಿಕ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸೋದಿಲ್ಲ ಎಂದಿದ್ದಾರೆ.
ಇನ್ನು ಚಾಮುಂಡೇಶ್ವರಿ ಕ್ಷೇತ್ರ ನನ್ನನ್ನು ಸೋಲಿಸಿದೆ, ಗೆಲ್ಲಿಸಿಯೂ ಇದೆ. ಆದರೆ 2023ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸೋದಿಲ್ಲ. ಎಲ್ಲಿ ಸ್ಪರ್ಧಿಸಬೇಕು ಎಂಬುದನ್ನು ನಿರ್ಧರಿಸಿಲ್ಲ ಎಂದರು.