ಪೂಂಚ್ , ಜು 18 (DaijiworldNews/MS): ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟಗೊಂಡು ಇಬ್ಬರು ಸೇನಾ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ.
ಮೆಂಧಾರ್ ಸೆಕ್ಟರ್ (ಜೆ & ಕೆ) ನಲ್ಲಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ತಮ್ಮ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದಾಗ ಸಂಭವಿಸಿದ ಗ್ರೆನೇಡ್ ಸ್ಫೋಟದಲ್ಲಿ ಕ್ಯಾಪ್ಟನ್ ಆನಂದ್ ಮತ್ತು ಎನ್ಬಿ ಸಬ್ ಭಗವಾನ್ ಸಿಂಗ್ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ
ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದಲ್ಲಿ ಸೇನಾ ಸಿಬ್ಬಂದಿಯನ್ನು ನಿಯೋಜಿಸಿದಾಗ ಭಾನುವಾರ ರಾತ್ರಿ ಈ ಘಟನೆ ನಡೆದಿದೆ
ಸೇನಾ ಕ್ಯಾಪ್ಟನ್ ಮತ್ತು ನೈಬ್-ಸುಬೇದಾರ್ (ಜೆಸಿಒ) ಅವರನ್ನು ತಕ್ಷಣವೇ ಹೆಲಿಕಾಪ್ಟರ್ನಲ್ಲಿ ಚಿಕಿತ್ಸೆಗಾಗಿ ಉಧಮ್ಪುರಕ್ಕೆ ಕರೆದೊಯ್ಯಲಾಯಿತು, ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ .