ಮುಂಬೈ, ಜು 18 (DaijiworldNews/MS): ರಾಷ್ಟ್ರಪತಿ ಚುನಾವಣೆಯ ಎನ್ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರ ಕುರಿತು ಅವರ ಕುರಿತು ಟ್ವೀಟ್ ಮಾಡಿದ್ದ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ರಾಮ್ ಗೋಪಾಲ್ ವರ್ಮ ವಿರುದ್ಧ ಮುಂಬೈ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ. ಜು.14 ರಂದು ಸುಭಾಸ್ ರಾಜೋರಾ ಎಂಬವವರು ವರ್ಮಾ ವಿರುದ್ಧ ದೂರು ದಾಖಲಿಸಿದ್ದರು.
"ದ್ರೌಪದಿ ರಾಷ್ಟ್ರಪತಿಯಾದರೆ ಪಾಂಡವರು ಯಾರು? ಮತ್ತು ಮುಖ್ಯವಾಗಿ ಕೌರವರು ಯಾರು?" ಎಂದು ಜೂನ್ 22ರಂದು ವರ್ಮಾ ಟ್ವೀಟ್ ಮಾಡಿದ್ದರು. ಎರಡು ದಿನಗಳ ಬಳಿಕ "ದ್ರೌಪದಿ ನನ್ನ ನೆಚ್ಚಿನ ಪಾತ್ರವಾಗಿದ್ದು ಆ ಹೆಸರು ಅಪರೂಪವಾಗಿರುವುದರಿಂದ ಅದಕ್ಕೆ ಸಂಬಂಧಿಸಿದ ಪಾತ್ರಗಳನ್ನು ನೆನಪಿಸಿದ್ದೆ ಅಷ್ಟೇ. ಯಾರ ಭಾವನೆಗಳಿಗೂ ಧಕ್ಕೆ ತರುವ ಉದ್ದೇಶವಿರಲಿಲ್ಲ" ಎಂಬ ಸ್ಪಷ್ಟನೆ ನೀಡಿದ್ದರು.
"ಸಾಮಾಜಿಕ ಮಾಧ್ಯಮದಲ್ಲಿ ಮಹಿಳೆಯರ ಗೌರವಕ್ಕೆ ಧಕ್ಕೆ ತಂದಿದ್ದಾರೆ . ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ರಾಜೋರಾ ನ್ಯಾಯಾಲಯದ ಮೆಟ್ಟಿಲೇರಿರುವುದಾಗಿ ಅರ್ಜಿದಾರರ ಪರ ವಕೀಲರು ಹೇಳಿದ್ದಾರೆ.
ಜುಲೈ 14ರಂದು ಪ್ರಕರಣ ದಾಖಲಾಗಿದ್ದು, ಅಕ್ಟೋಬರ್ 11ಕ್ಕೆ ವಿಚಾರಣೆ ನಡೆಯಲಿದೆ