ಧಾರ್, ಜು 18 (DaijiworldNews/HR): 100 ಅಡಿ ಎತ್ತರವಿದ್ದ ಸೇತುವೆಯಿಂದ ಇಂಧೋರ್ನಿಂದ ಬಸ್ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ನರ್ಮದಾ ನದಿಗೆ ಉರುಳಿ ಬಿದ್ದ ಪರಿಣಾಮ 13 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಧಾರ್ನಲ್ಲಿ ನಡೆದಿದೆ.
ಬಸ್ನಲ್ಲಿ ಸುಮಾರು 50 ರಿಂದ 60 ಪ್ರಯಾಣಿಕರಿದ್ದು, ಘಟನಾ ಸ್ಥಳದಿಂದ ಇದುವರೆಗೆ 15 ಪ್ರಯಾಣಿಕರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆ ಕುರಿತು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಪ್ರತಿಕ್ರಿಯಿಸಿದ್ದು,, ಜಿಲ್ಲಾಡಳಿತದ ತಂಡವು ಅಪಘಾತ ಸ್ಥಳದಲ್ಲಿದೆ. ಬಸ್ ಅನ್ನು ನದಿಯಿಂದ ಮೇಲೆ ತೆಗೆಯಲಾಗಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸೂಚನೆಗಳನ್ನು ನೀಡಲಾಗಿದೆ ಎಂದರು.