ಮುಂಬೈ, ಜು 18 (DaijiworldNews/HR): ಮಹಾರಾಷ್ಟ್ರ ಶಿವಸೇನೆ ಪಕ್ಷದ ನಾಯಕ ಸ್ಥಾನಕ್ಕೆ ಮಾಜಿ ಸಚಿವ ರಾಮದಾಸ್ ಕದಂ ರಾಜೀನಾಮೆ ನೀಡಿದ್ದು, ಉದ್ಧವ್ ಠಾಕ್ರೆಗೆ ಮತ್ತೊಂದು ಆಘಾತವಾಗಿದೆ.
ಉದ್ಧವ್ ಠಾಕ್ರೆ ಬಣದಲ್ಲಿ ಗುರುತಿಸಿಕೊಂಡಿದ್ದ ರಾಮದಾಸ್ ಕದಂ ಅವರು ಪಕ್ಷದಲ್ಲಿ ಪ್ರಮುಖ ನಾಯಕರಾಗಿದ್ದು, ಅವರ ರಾಜೀನಾಮೆಯಿಂದ ಠಾಕ್ರೆಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ ಎನ್ನಲಾಗಿದೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ರಾಮದಾಸ್ ಕದಂ, ಎನ್ಸಿಪಿ ಮತ್ತು ಕಾಂಗ್ರೆಸ್ ಪಕ್ಷದೊಂದಿಗೆ ಕೈಜೋಡಿಸುವ ಮೂಲಕ ಉದ್ಧವ್ ಠಾಕ್ರೆ ಅವರು ಬಾಳಾಸಾಹೇಬ್ ಠಾಕ್ರೆ ಅವರ ಸಿದ್ಧಾಂತಗಳನ್ನು ಗಾಳಿಗೆ ತೋರಿದ್ದಾರೆ ಎಂದು ಆರೋಪಿಸಿದ್ದಾರೆ.