ನವದೆಹಲಿ, ಜು 19 (DaijiworldNews/HR): ಉಪರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷದ ಅಭ್ಯರ್ಥಿ ಮಾರ್ಗರೆಟ್ ಆಳ್ವ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಇತರ ವಿರೋಧ ಪಕ್ಷದ ನಾಯಕರ ಸಮ್ಮುಖದಲ್ಲಿ ಮಾರ್ಗರೆಟ್ ಆಳ್ವ ನಾಮಪತ್ರ ಸಲ್ಲಿಸಿದ್ದಾರೆ.
ಇನ್ನುಆಗಸ್ಟ್ 6 ರಂದು ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಇಂದೇ ಕೊನೆಯ ದಿನಾಂಕವಾಗಿದೆ.