ನವದೆಹಲಿ, ಜು 19 (DaijiworldNews/HR): ಮೊಹಮ್ಮದ್ ಬಗ್ಗೆ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ಅವರನ್ನು ಹತ್ಯೆ ಮಾಡುವ ಉದ್ದೇಶದಿಂದ ಭಾರತದ ಗಡಿ ದಾಟಿ ಬಂದಿದ್ದ ಎನ್ನಲಾದ ಪಾಕಿಸ್ತಾನದ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ರಾಜಸ್ಥಾನದ ಶ್ರೀಗಂಗಾ ನಗರ್ ಜಿಲ್ಲೆಯಲ್ಲಿ ನಡೆದಿದೆ.
ಬಂಧಿತನನ್ನು ರಿಜ್ವಾನ್ ಅಶ್ರಫ್ ಎಂದು ಗುರುತಿಸಲಾಗಿದೆ.
ಪಾಕಿಸ್ತಾನ ಮೂಲದಯ ವ್ಯಕ್ತಿಯ ಬಗ್ಗೆ ಗಸ್ತು ತಂಡಕ್ಕೆ ಅನುಮಾನ ಮೂಡಿಬಂದಿದ್ದು, ತಕ್ಷಣವೇ ಆತನನ್ನು ಬಂಧಿಸಲಾಯಿತು ಎಂದು ಹಿರಿಯ ಬಿಎಸ್ಎಫ್ ಅಧಿಕಾರಿರೊಬ್ಬರು ಮಾಹಿತಿ ನೀಡಿದ್ದಾರೆ.
ಇನ್ನು ಬಂಧಿತ ವ್ಯಕ್ತಿಯಿಂದ 11 ಇಂಚಿನ ಉದ್ದದ ಚಾಕು, ಧಾರ್ಮಿಕ ಪುಸ್ತಕಗಳು, ಬಟ್ಟೆಗಳು, ಆಹಾರ ಹಾಗೂ ಮರಳನ್ನು ವಶಕ್ಕೆ ಪಡೆಯಲಾಗಿದೆ.
ವಿಚಾರಣೆಯಲ್ಲಿ ಆತ ನೂಪುರ್ ಶರ್ಮಾ ಅವರನ್ನು ಹತ್ಯೆ ಮಾಡುವುದಕ್ಕಾಗಿ ಭಾರತಕ್ಕೆ ಬಂದಿದ್ದ ಎಂದು ತಿಳಿದುಬಂದಿದೆ.