ಉತ್ತರಕನ್ನಡ, ಜು 19 (DaijiworldNews/HR): ವಿಷ ಸೇವಿಸಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪ್ರೇಮಿಗಳು ಚಿಕಿತ್ಸೆ ಫಲಕಾರಿಯಾದೇ ಇಂದು ಮೃತಪಟ್ಟಿರುವ ಘಟನೆ ನದೆದಿದೆ.
ಮೃತರನ್ನು ಉತ್ತರಕನ್ನಡ ಜಿಲ್ಲೆ ಹಳಿಯಾಳ ಮೂಲದ ಜ್ಯೋತಿ ಸುರೇಶ ಅಂತ್ರೋಳಕರ(19), ರಿಕೇಶ್ ಸುರೇಶ ಮಿರಾಶಿ(20) ಎಂದು ಗುರುತಿಸಲಾಗಿದೆ.
ಹಳಿಯಾಳದ ಹವಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇವರಿಬ್ಬರು ವಿದ್ಯಾಭ್ಯಾಸ ಮಾಡುತ್ತಿದ್ದರು. ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ತಿಂಗಳ ಹಿಂದೆ ಯುವತಿಯ ಪೋಷಕರು ಆಕೆಗೆ ಬೇರೊಬ್ಬ ಯುವಕನೊಂದಿಗೆ ಮದುವೆ ಮಾಡಿದ್ದರು. ಪ್ರಿಯಕರನನ್ನು ಬಿಟ್ಟು ಬದುಕಲಾಗದೆ ಜ್ಯೋತಿ ಜುಲೈ 15ರಂದು ಮುಂಡಗೋಡು ರಸ್ತೆಯಲ್ಲಿ ಪ್ರಿಯಕರ ರಿಕೇಶ್ ಜತೆ ವಿಷ ಸೇವಿಸಿದ್ದಳು.
ಇನ್ನು ನಾಲ್ಕು ದಿನ ಸಾವು-ಬದುಕಿನ ನಡುವೆ ಹೋರಾಡಿದ ಪ್ರೇಮಿಗಳು ಇಂದು ಸಾವನ್ನಪ್ಪಿದಾರೆ.