ನವದೆಹಲಿ, ಜು 19 (DaijiworldNews/HR): ನ್ಯೂ ಅಶೋಕ್ ನಗರ ಪ್ರದೇಶದ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ.
ಬೆಂಕಿಯನ್ನು ನಿಯಂತ್ರಣಕ್ಕೆ ತರಲು 5 ಅಗ್ನಿಶಾಮಕ ಟೆಂಡರ್ಗಳು ಸ್ಥಳಕ್ಕೆ ಧಾವಿಸಿದ್ದು, ಜೀವಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.
ಇನ್ನು ಕಟ್ಟಡದಿಂದ ಇಲ್ಲಿಯವರೆಗೆ 12 ಸಿಬ್ಬಂದಿಯನ್ನು ರಕ್ಷಿಸಲಾಗಿದ್ದು, ಬೆಂಕಿಗೆ ಆಹುತಿಯಾದ ಕಟ್ಟಡವು 3 ಮಹಡಿಗಳನ್ನು ಹೊಂದಿದೆ ಎನ್ನಲಾಗಿದೆ.