ಮೈಸೂರು, ಜು 20 (DaijiworldNews/HR): ಕೆಪಿಸಿಸಿ ಅಧ್ಯಕ್ಷರಾಗಿಯೇ ಕೆಲಸ ನಿರ್ವಹಿಸಲು ಆಗದವರು, ಸಿಎಂ ಹುದ್ದೆ ಕನಸು ಕಾಣುತ್ತಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ರಿಮೋಟ್ ಕಂಟ್ರೋಲ್ ಸಿಎಂ ಎಂಬ ಡಿಕೆಶಿ ಹೇಳಿಕೆಗೆ ತಿರುಗೇಟು ನೀಡಿರುವ ಬೊಮ್ಮಾಯಿ, ಕೆಪಿಸಿಸಿ ಅಧ್ಯಕ್ಷರಾಗಿಯೇ ಅವರಿಗೆ ಕೆಲಸ ನಿರ್ವಹಿಸಲು ಆಗುತ್ತಿಲ್ಲ, ಸಿಎಂ ಹುದ್ದೆ ಕನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಇನ್ನು ಡಿಕೆಶಿ ಬಹಳ ವರ್ಷಗಳಿಂದ ಸಿಎಂ ಆಗುವ ಕನಸು ಕಾಣುತ್ತಿದ್ದು, ಕೆಪಿಸಿಸಿ ಅಧ್ಯಕ್ಷರಾಗಿ ಕೆಲಸ ಮಾಡಲು ಕಾಂಗ್ರೆಸ್ ನವರೇ ಅವರಿಗೆ ಬಿಡುತ್ತಿಲ್ಲ. ಅಧ್ಯಕ್ಷ ಸ್ಥಾನ ಕೆಲಸ ಮಾಡುವುದು ಅವರಿಗೆ ಕಷ್ಟವಾಗಿದೆ ಎಂದಿದ್ದಾರೆ.
ಮುಖ್ಯಮಂತ್ರಿ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವೆ ಸ್ಪರ್ಧೆ ನಡೆಯುತ್ತಿದ್ದು, ಇಬ್ಬರೂ ನಾನೊಂದು ತೀರ ನೀನೊಂದು ತೀರ ಎಂಬಂತಾಗಿದೆ ಎಂದು ಹೇಳಿದ್ದಾರೆ.