ನವದೆಹಲಿ, ಜು 20 (DaijiworldNews/HR): ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ಸಂಬಂಧ ತುರ್ತು ವಿಚಾರಣೆ ನಡೆಸಲು ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಜುಲೈ 26 ಕ್ಕೆ ಮುಂದೂಡಿದೆ.
ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ಗೆ ಮೇಕೆದಾಟು ಅಣೆಕಟ್ಟು ಯೋಜನೆ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದು, ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆಯನ್ನು ಜುಲೈ 26 ಕ್ಕೆ ಮುಂದೂಡಿದೆ.
ಇನ್ನು ತಮಿಳುನಾಡು ಸರ್ಕಾರವು ಕಳೆದ ವಾರ ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ಸಂಬಂಧ ತುರ್ತು ವಿಚಾರಣೆ ನಡೆಬೇಕು ಎಂದು ಒತ್ತಾಯಿಸಿ ಸುಪ್ರೀಂಕೋರ್ಟ್ಗೆ ಮನವಿ ಮಾಡಿತ್ತು.