ನವದೆಹಲಿ, ಜು 20 (DaijiworldNews/MS): ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿದ್ದ ಎಲ್ಲ ಆರು ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಜುಬೈರ್ ವಿರುದ್ಧ ಉತ್ತರ ಪ್ರದೇಶದಲ್ಲಿ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ಒಟ್ಟುಗೂಡಿಸಿ, ದೆಹಲಿಗೆ ವರ್ಗಾಯಿಸುವಂತೆ ಆದೇಶಿಸಿರುವ ನ್ಯಾಯಾಲಯವು, ಈ ಕುರಿತಂತೆ ಏಕೀಕೃತ ತನಿಖೆ ನಡೆಯಬೇಕೆಂದು ಹೇಳಿದೆ.
ಇಂದು ಸಂಜೆ 6 ಗಂಟೆಯೊಳಗೆ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲು ನ್ಯಾಯಾಲಯ ಆದೇಶಿಸಿದೆ.
ಎಲ್ಲಾ ಎಫ್ಐಆರ್ಗಳಲ್ಲಿ ಅವರನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು .ದಿಲ್ಲಿ ಪೊಲೀಸರಿಂದ ಸಾಕಷ್ಟು ನಿರಂತರ ತನಿಖೆಗೆ ಒಳಪಡಿಸಲಾಗಿದೆ ಎಂದು ಕಂಡುಕೊಂಡ ನಂತರ, ಅವರನ್ನು ನಿರಂತರ ಕಸ್ಟಡಿಯಲ್ಲಿ ಇರಿಸಿಕೊಳ್ಳಲು ಯಾವುದೇ ಸಮರ್ಥನೆ ಇಲ್ಲ ಯಾವುದೇ ಕಾರಣವಿಲ್ಲ" ಎಂದು ಸುಪ್ರೀಂ ಕೋರ್ಟ್ ಹೇಳಿದೆ.