ಪಂಜಾಬ್, ಜು 20 (DaijiworldNews/HR): ಅಮೃತಸರ ಜಿಲ್ಲೆಯ ಚೀಚಾ ಭಕ್ನಾ ಗ್ರಾಮದಲ್ಲಿ ಪೊಲೀಸರೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಗ್ಯಾಂಗ್ ಸ್ಟರ್ರನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಹತ್ಯೆಯಾದವರನ್ನು ಮನ್ಪ್ರೀತ್ ಸಿಂಗ್ ಅಲಿಯಾಸ್ ಮನ್ನು ಕುಸಾ ಮತ್ತು ಜಗ್ರೂಪ್ ಸಿಂಗ್ ಅಲಿಯಾಸ್ ರೂಪಾ ಎಂದು ಗುರುತಿಸಲಾಗಿದೆ.
ಗಾಯಕ ಮತ್ತು ರಾಜಕಾರಣಿ ಸಿಧು ಮೂಸ್ ವಾಲಾ ಅವರ ಹತ್ಯೆಯೊಂದಿಗೆ ನಂಟು ಹೊಂದಿರುವ ಇಬ್ಬರು ದರೋಡೆಕೋರರು ಈ ಹೋರಾಟದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾಗಿದೆ.
ಈ ಇಬ್ಬರು ಅಡಗಿಕೊಂಡಿದ್ದಾರೆ ಎಂಬ ಮಾಹಿತಿ ಮೆರೆಗೆ ಪೊಲೀಸರು ಎನ್ಕೌಂಟರ್ ನಡೆಸಿದ್ದು, ಈ ವೇಳೆ ಗ್ಯಾಂಗ್ ಸ್ಟರ್ ಗಳು ಕೂಡ ಗುಂಡು ಹಾರಿಸಿದ್ದು, ಕೆಲವು ಪೊಲೀಸರು ಸಹ ಗುಂಡೇಟಿನಿಂದ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.