ರಾಮೇಶ್ವರ, ಜು 21 (DaijiworldNews/DB): ಜಲಗಡಿ ಉಲ್ಲಂಘಿಸಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ತಮಿಳುನಾಡಿನ ಆರು ಮಂದಿ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಆರು ಮಂದಿ ಮೀನುಗಾರರು ಹಾಗೂ ಪಾಲ್ಕ್ ಬೇ ಪ್ರದೇಶದಲ್ಲಿ ಮೀನುಗಾರಿಕೆ ನಡೆಸಲು ಬಳಸಿದ ಎರಡು ದೋಣಿಗಳನ್ನು ಶ್ರೀಲಂಕಾ ನೌಕಾಪಡೆ ಈ ವೇಳೆ ವಶಪಡಿಸಿಕೊಂಡಿದೆ. ಬಂಧಿತರನ್ನು ತಲೈಮನ್ನಾರ್ ಪೊಲೀಸರ ವಶಕ್ಕೆ ನೀಡಲಾಗಿದೆ ಎಂದು ಶ್ರೀಲಂಕಾ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಕೆಲವು ತಿಂಗಳುಗಳಿಂದೀಚೆಗೆ ಜಲಗಡಿ ಉಲ್ಲಂಘಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಹಲವು ಮಂದಿ ಭಾರತೀಯ ಮೀನುಗಾರರನ್ನು ಶ್ರೀಲಂಕಾದಲ್ಲಿ ಬಂಧಿಸಲಾಗಿತ್ತು.