ತೆಲಂಗಾಣ, ಜು 21 (DaijiworldNews/DB): ಮಗನ ಪ್ರೇಮವಿವಾಹದಿಂದ ಮನನೊಂದ ಅತ್ತೆಯೊಬ್ಬರು ತನ್ನ ಗರ್ಭಿಣಿ ಸೊಸೆಗೆ ಬೆಂಕಿ ಹಚ್ಚಿದ ಅಮಾನವೀಯ ಘಟನೆ ತೆಲಂಗಾಣದಲ್ಲಿ ನಡೆದಿದೆ.
ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಸಂತ್ರಸ್ತೆ ಶೇ.50 ಸುಟ್ಟ ಗಾಯಗಳೊಂದಿಗೆ ನಿಜಮಸಾಗರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಭ್ರೂಣ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಆರೋಪಿ ಅತ್ತೆ ಹಾಗೂ ಸಂತ್ರಸ್ತೆಯ ಪತಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕಳೆದ ರವಿವಾರ ಕುರಟಿ ಎಂಬಾತ ಸಂತ್ರಸ್ತೆಯೊಂದಿಗೆ ಜಗಳವಾಡಿದ್ದ. ಈ ಜಗಳ ದೊಡ್ಡದಾಗಿ ಅತ್ತೆ ಸೊಸೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.