ಕೊಲ್ಲಂ, ಜು 21 (DaijiworldNews/MS): ಕೇರಳದ ಕೊಲ್ಲಂನಲ್ಲಿಇತ್ತೀಚೆಗೆ ನಡೆದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿನಿಯರ ಒಳಉಡುಪು ಬಿಚ್ಚಿಡುವಂತೆ ಒತ್ತಡ ಹೇರಿದ ವಿವಾದಕ್ಕೆ ಸಂಬಂಧಿಸಿದಂತೆ ನೀಟ್ ಪರೀಕ್ಷೆಯ ಮೇಲ್ವಿಚಾರಣೆ ನಡೆಸುತ್ತಿದ್ದ ಮತ್ತಿಬ್ಬರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ನೀಟ್ ವೀಕ್ಷಕ ಮತ್ತು ಪರೀಕ್ಷಾ ಸಂಯೋಜಕನನ್ನು ಬಂಧಿಸಿದ್ದು ಆ ಮೂಲಕ ಇದುವರೆಗೂ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನೀಟ್ ಪರೀಕ್ಷೆ ಕರ್ತವ್ಯದಲ್ಲಿದ್ದ ಐವರು ಮಹಿಳೆಯರನ್ನು ಮಂಗಳವಾರ ಬಂಧಿಸಲಾಗಿದೆ. ಇವರಲ್ಲಿ ಮೂವರು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್ಟಿಎ) ನೇಮಿಸಿದ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದರೆ, ಉಳಿದ ಇಬ್ಬರು ಘಟನೆ ನಡೆದ ಆಯುರ್ನಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು.
ಈ ಘಟನೆ ಸಂಬಂಧ ನೀಟ್ ಸತ್ಯಶೋಧನಾ ಸಮಿತಿಯನ್ನು ರಚಿಸಿದೆ. ಸಮಿತಿಯು ನಾಲ್ಕು ವಾರಗಳಲ್ಲಿ ತನ್ನ ವರದಿಯನ್ನು ಸಲ್ಲಿಸಲಿದೆ .