ಬೆಂಗಳೂರು, ಜು 21 (DaijiworldNews/MS): ಬಿಜೆಪಿ ರಾಜ್ಯ ಘಟಕದ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಜಿ.ವಿ ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರು ಆದೇಶ ಹೊರಡಿಸಿದ್ದಾರೆ.
ರಾಜೇಶ್ ಜಿ.ವಿ ಅವರು ದಕ್ಷಿಣ ಕನ್ನಡ ಮೂಲದ ಆರ್ಎಸ್ಎಸ್ ಕಾರ್ಯಕರ್ತರಾಗಿದ್ದಾರೆ. ಮೈಸೂರು ಹಾಗೂ ಪ್ರಸ್ತುತ್ತ ತುಮಕೂರು ವಿಭಾಗದ ಪ್ರಚಾರಕರಾಗಿದ್ದಾರೆ.
ಈ ಮೊದಲು ಬಿಜೆಪಿ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿಯಾಗಿದ್ದ ಅರುಣ್ ಕುಮಾರ್ ಅವರನ್ನು ಆರ್ಎಸ್ಎಸ್ಗೆ ಮರು ನಿಯುಕ್ತಿ ಮಾಡಲಾಗಿದೆ.