ನವದೆಹಲಿ, ಜು 21 (DaijiworldNews/MS): ರಾಜ್ಯಸಭಾ ಸದಸ್ಯರಾಗಿ ಇಂದು ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದ್ದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.
ಈ ವೇಳೆ ಹೆಗ್ಗಡೆ ಅವರು ಪ್ರಧಾನಿ ಅವರಿಗೆ ಶಾಲು ಹಾರ ಹಾಕಿ ಅಭಿನಂದಿಸಿ ಕೃತಜ್ಞತೆ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಪ್ರಧಾನಿಗಳು ಮೆಚ್ಚುಗೆಯ ಮಾತುಗಳನ್ನು ಆಡಿದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರೊಂದಿಗಿದ್ದರು.
ಇದಕ್ಕೂ ಮುನ್ನಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಸಂಸತ್ ಭವನದಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಗೌರವಪೂರ್ವಕವಾಗಿ ಸ್ವಾಗತಿಸಿದ್ದರು.