ನವದೆಹಲಿ, ಜು 21 (DaijiworldNews/DB): ರಾಷ್ಟ್ರಪತಿ ಚುನಾವಣೆಯ ಮೊದಲ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮೊದಲ ಸುತ್ತಿನ ಮತ ಎಣಿಕೆಯಲ್ಲಿ ದ್ರೌಪದಿ ಮುರ್ಮು ಅವರು 3,78,000 ಮೌಲ್ಯದ 540 ಮತ ಪಡೆದುಕೊಂಡಿದ್ದಾರೆ. ವಿಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರು 1,45,600 ಮೌಲ್ಯದ 208 ಮತಗಳನ್ನು ಪಡೆದುಕೊಂಡಿದ್ದಾರೆ ಎಂದು ರಾಜ್ಯಸಭಾ ಸೆಕ್ರೆಟರಿ ಜನರಲ್ ಪಿ.ಸಿ. ಮೋದಿ ತಿಳಿಸಿದ್ದಾರೆ.