ನವದೆಹಲಿ, ಜು 22 (DaijiworldNews/HR): ಪಟ್ನಾದಿಂದ ದೆಹಲಿಗೆ ತೆರಳಬೇಕಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಇದೆ ಎಂದು ಹೇಳಿದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಗುರುವಾರ ರಾತ್ರಿ 8.20ಕ್ಕೆ ಹೊರಡಬೇಕಿದ್ದ ವಿಮಾನದಲ್ಲಿ ಬಾಂಬ್ ಇರಿಸಿರುವ ಬೆದರಿಕೆ ಕರೆ ಬಂದ ಬಳಿಕ ತಪಾಸಣೆ ಮಾಡಲಾಗಿದ್ದು, ಆದರೆ ತನಿಖೆಯ ಬಳಿಕ ಅದೊಂದು ಹುಸಿ ಬಾಂಬ್ ಕರೆ ಎಂದು ಪತ್ತೆಯಾಗಿದೆ.
ಇನ್ನು ಬಾಂಬ್ ಬೆದರಿಕೆ ಬಂದ ಕೂಡಲೇ ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಿ, ತಪಾಸಣೆ ನಡೆಸಲಾಗಿದ್ದು, ಬಾಂಬ್ ಬೆದರಿಕೆ ಒಡ್ಡಿದ್ದ ಪ್ರಯಾಣಿಕನನ್ನು ಸ್ಥಳೀಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.