ನವದೆಹಲಿ, ಜು 22 (DaijiworldNews/MS): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮನೆ ಮನೆಗಳಲ್ಲಿ ಆಗಸ್ಟ್ 13 ಮತ್ತು 15 ರವರೆಗೆ ತ್ರಿವರ್ಣ ಧ್ವಜವನ್ನು ಹಾರಿಸಿ ರಾಷ್ಟ್ರಧ್ವಜದೊಂದಿಗಿನ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸೋಣ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಕರೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ , ಈ ವರ್ಷ, ನಾವು ಆಜಾದಿ ಕಾ ಅಮೃತ್ ಮಹೋತ್ಸವವನ್ನು ಆಚರಿಸುತ್ತಿದ್ದು, "ನಾವು ಹರ್ ಘರ್ ತಿರಂಗ" ಚಳುವಳಿಯನ್ನು ಬಲಪಡಿಸೋಣ. ತ್ರಿವರ್ಣ ಧ್ವಜವನ್ನು ಹಾರಿಸಿ ಅಥವಾ ನಿಮ್ಮ ಮನೆಗಳಲ್ಲಿ ಆಗಸ್ಟ್ 13 ಮತ್ತು 15 ರ ನಡುವೆ ಪ್ರದರ್ಶಿಸಿ. ಈ ಆಂದೋಲನವು ರಾಷ್ಟ್ರಧ್ವಜದೊಂದಿಗೆ ನಮ್ಮ ಸಂಬಂಧವನ್ನು ಇನ್ನಷ್ಟು ಬಲಿಷ್ಟಗೊಳಿಸುತ್ತದೆ ಎಂದು ಬರೆದುಕೊಂಡಿದ್ದಾರೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ(ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ) ಅಭಿಯಾನವನ್ನು ಕೇಂದ್ರ ಸರ್ಕಾರ ಹಮ್ಮಿಕೊಂಡಿದ್ದು, ದೇಶಾದ್ಯಂತ ಬರೋಬ್ಬರಿ 20 ಕೋಟಿ ಮನೆಗಳ ಮೇಲೆ ಧ್ವಜವನ್ನು ಹಾರಿಸಲು ಸಿದ್ಧತೆ ನಡೆಸಲಾಗುತ್ತಿದೆ.