ಬೆಂಗಳೂರು, ಜು 22(DaijiworldNews/DB): ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ 50ಕ್ಕೂ ಹೆಚ್ಚು ಮಂದಿ ಮಠಾಧೀಶರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ದೂರು ನೀಡಿದ್ದಾರೆ.
ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪ್ರಿಯಾಂಕ್ ಖರ್ಗೆ ದಬ್ಬಾಳಿಕೆ ಹೆಚ್ಚುತ್ತಿದೆ. ಅಲ್ಲದೆ ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಎಂದು ಆರೋಪಿಸಿ ಬಂಜಾರ ಮಠ ಹಾಗೂ ವೀರಶೈವ ಮಠಾಧೀಶರು ದೂರು ನೀಡಿದ್ದಾರೆ.
ಈಗಾಗಲೇ ಪ್ರಮೋದ್ ಮುತಾಲಿಕ್ ಸೇರಿದಂತೆ ಹಲವರ ವಿರುದ್ದ ಪ್ರಿಯಾಂಕ್ ಖರ್ಗೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಪೊಲೀಸ್ ಅಧಿಕಾರಿ ಅಲೋಕ್ಕುಮಾರ್ ಅವರು ಪ್ರಿಯಾಂಕ್ ಖರ್ಗೆ ಹೇಳಿದಂತೆಯೇ ಮಾಡುತ್ತಿದ್ದಾರೆ. ಹಿಂದೂ ಕಾರ್ಯಕರ್ತರ ಮೇಲೆ ದಾಖಲಿಸಿದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಬೇಕು. ಅಲ್ಲದೆ ಈ ವಿಧಾನಸಭಾ ಕ್ಷೇತ್ರದಲ್ಲಿ ಹಿಂದೂ ಕಾರ್ಯಕರ್ತರ ಮೇಲಾಗುತ್ತಿರುವ ದೌರ್ಜನ್ಯವನ್ನು ತಡೆಗಟ್ಟಿ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ಸಿಎಂಗೆ ಮನವಿ ಸಲ್ಲಿಸಿದ್ದಾರೆ.